ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸೋಷಿಯಲ್ ಮಿಡೀಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಒಂದು ಸಮುದಾಯವನ್ನು ಕೆರಳಿಸಿದೆ. ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದರು.
ಈ ಘಟನೆಯಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂಬುದನ್ನು ನಾವು ನಿರ್ಧಾರ ಮಾಡಲು ಆಗುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಮಾಡಿರುತ್ತಾರೆ. ತಪ್ಪು ಮಾಡಿದ್ದರೆ ಪೊಲೀಸರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ಸಂದರ್ಭಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್, ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲು ಕ್ರಮ ಜರುಗಿಸಲಾಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಸ್ಥಳಕ್ಕೆ ಹೋಗಿದ್ದಾರೆ ಎಂದು ಹೇಳಿದರು.