Friday, March 31, 2023

Latest Posts

ಬೆಂಗಳೂರಿನಲ್ಲಿ ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ: 2ಗಾಜುಗಳು ಪುಡಿ ಪುಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿನ್ನೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ನ ಎರಡು ಗಾಜುಗಳಿಗೆ ಹಾನಿಯಾಗಿದೆ. ಕೃಷ್ಣರಾಜಪುರಂ-ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಕಲ್ಲು ತೂರಾಟ ನಡೆಸಿರುವ ಕಿಡಿಗೇಡಿಗಳಿಗಾಗಿ ರೇಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ರೈಲ್ವೆ ಇಲಾಖೆ ಸಂಬಂಧದಿಸಿದ ವಸ್ತುಗಳನ್ನು ನಾಶ ಮಾಡಿದವರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ವಂದೇ ಭಾರತ್‌ ಎಕ್ಸ್‌ಪ್ರಸ್‌ ಮೇಲೆ ಫೆಬ್ರವರಿ ತಿಂಗಳಲ್ಲೇ ಒಟ್ಟು ಹದಿಮೂರು ಪ್ರಕರಣಗಳು ದಾಖಲಾಗಿವೆ. ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಾಗಿದೆ. ಇದನ್ನು ಕಳೆದ ವರ್ಷ 2022ರ ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!