ಹೊಸದಿಗಂತ ವರದಿ, ಶಿವಮೊಗ್ಗ:
ನಗರದ ಕಾಲೇಜುಗಳಲ್ಲಿ ನಡೆದಿರುವ ಹಿಜಾಬ್ ವಿವಾದ ಮತ್ತು ಕಲ್ಲು ತೂರಾಟ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಬೇಕೆಂದು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಕೇವಲ ಪ್ರತಿಭಟನೆ ನಡೆಯದೇ ಗಲಾಟೆಗಳು ನಡೆದಿವೆ. ಶಿವಮೊಗ್ಗ, ಸಾಗರದಲ್ಲಿ ಕಲ್ಲು ತೂರಾಟ ಮಾಡಲಾಗಿದೆ. ಇದಕ್ಕೆ ಪೂರ್ವ ಸಿದ್ಧತೆ ಮಾಡಿಕೊಂಡಿರುವ ಮಾಹಿತಿಯೂ ಇದೆ. ಹಾಗಾಗಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಭವ್ಯ ಭಾರತದ ಪ್ರಜೆಗಳನ್ನು ನಿರ್ಮಾಣ ಮಾಡಬೇಕಾದ ಶಿಕ್ಷಣ ಕೇಂದ್ರಗಳಲ್ಲಿ ಧಾರ್ಮಿಕ ವಿಷ ಬೀಜ ಬಿತ್ತುವ ಕಾರ್ಯ ನಡೆದಿದೆ. ರಾಜಕೀಯ ಬೆರೆಸಲಾಗುತ್ತಿದೆ. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮತ್ತು ಪಿಎಫ್ಐ ಧರ್ಮದ ವಿಷ ಬೀಜ ಬಿತ್ತುತ್ತಿವೆ. ಈಗಾಗಲೇ ಹಿಜಾಬ್ ವಿಷಯದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಬೇಕಾಗುತ್ತದೆ ಎಂದರು.