ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ದುಷ್ಕರ್ಮಿಗಳು ಕಲ್ಲು ತೂರಿರುವ ಮತ್ತೊಂದು ಘಟನೆ ಬುಧವಾರ ನಡೆದಿದೆ.
ಆಗ್ರಾ ರೈಲ್ವೇ ವಿಭಾಗದ ಭೋಪಾಲ್‌ನಿಂದ ದೆಹಲಿಯ ನಿಜಾಮುದ್ದೀನ್ ನಿಲ್ದಾಣಕ್ಕೆ ಸಂಚರಿಸುತ್ತಿದ್ದ
ವಂದೇ ಭಾರತ್ ರೈಲಿಗೆ ದುಷ್ಕರ್ಮಿಗಳು ಕಲ್ಲು ತೂರಿದ್ದು, ರೈಲು ಕೋಚ್‌ನ ಗಾಜುಗಳಿಗೆ ಹಾನಿಯಾಗಿದೆ.
ಆಗ್ರಾದ ಮಾನಿಯಾ ಮತ್ತು ಜಜೌ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿರುವ ವೇಳೆ ಕಲ್ಲು ತೂರಲಾಗಿದೆ. ಸಿ-7 ಕೋಚ್‌ನ ಸೀಟ್ ಸಂಖ್ಯೆ 13-14ರ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ಕೂಡಲೇ ರೈಲ್ವೇ ಸಿಬ್ಬಂದಿಯ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಆಗ್ರಾ ರೈಲ್ವೆ ವಿಭಾಗದ ಪಿಆರ್‌ಒ ಶ್ರೀವಾಸ್ತವ ತಿಳಿಸಿದ್ದಾರೆ.
ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.