ಮಾಜಿ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ, ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಗ್ಪುರ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಎಸ್‌ಪಿ) ನಾಯಕ ಅನಿಲ್ ದೇಶ್‌ಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾತ್ರಿ 8 ಗಂಟೆ ಸುಮಾರಿಗೆ ದೇಶಮುಖ್ ನಾರ್ಖೇಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕಟೋಲ್ ಬಳಿಯ ಜಲಖೇಡ ರಸ್ತೆಯ ಬೆಲ್ಫಟಾ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ದೇಶಮುಖ ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ದಾಳಿಯ ವೇಳೆ ಗಾಯಗೊಂಡ ದೇಶಮುಖ್ ಅವರನ್ನು ತಕ್ಷಣವೇ ಕಟೋಲ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಹರ್ಷ್ ಪೊದ್ದಾರ್ ಘಟನೆಯನ್ನು ಖಚಿತಪಡಿಸಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆ ಆರಂಭವಾಗಿದೆ. ಪೊಲೀಸರು ದಾಳಿಗೆ ಕಾರಣರಾದವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ. ಎನ್‌ಸಿಪಿ ದಾಳಿಯನ್ನು ಖಂಡಿಸಿದೆ ಮತ್ತು ಇದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!