ಕೊತ ಕೊತ ಕುದಿಯುತ್ತಿದೆ ಪಾಕ್:‌ ಇಂಟರ್ನೆಟ್‌ ಸೇವೆ ಬಂದ್‌, ಸೇನೆಯ ಹಿಡಿತದಲ್ಲಿ ಪಂಜಾಬ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ನಿನ್ನೆ ಇಸ್ಲಾಮಾಬಾದ್‌ನಲ್ಲಿ ಇಮ್ರಾನ್ ಖಾನ್ ಅವರನ್ನು ಬಂಧಿಸಿದ ನಂತರ, ಪಿಟಿಐ ಕಾರ್ಯಕರ್ತರು ಮತ್ತು ಇಮ್ರಾನ್ ಖಾನ್ ಬೆಂಬಲಿಗರು ದೇಶದ ಎಲ್ಲಾ ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಲಾಹೋರ್, ಇಸ್ಲಾಮಾಬಾದ್ ಮತ್ತು ಕ್ವೆಟ್ಟಾದಲ್ಲಿ ಸೇನಾ ಕಂಟೋನ್ಮೆಂಟ್‌ಗಳ ಮೇಲೆ ದಾಳಿ ನಡೆಸಲಾಯಿತು. ಇದೇ ವೇಳೆ ಗಲಭೆ ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮವನ್ನು ನಿರ್ಬಂಧಿಸಲಾಗಿದೆ. ಈ ನಡುವೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯವನ್ನು ಸೇನೆ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ ಎಂದು ಪಾಕ್ ಮಾಧ್ಯಮಗಳು ಹೇಳುತ್ತಿವೆ. ಪಂಜಾಬ್ ಇಮ್ರಾನ್ ಖಾನ್ ಅವರ ತವರು ರಾಜ್ಯ. ಗಲಭೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.

ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಯನ್ನು ಹಿಂಸಾಚಾರಕ್ಕೆ ತಿರುಗಿಸಲು ಕೆಲವು ದುಷ್ಟ ಶಕ್ತಿಗಳು ಪ್ರಯತ್ನಿಸುವ ಸಾಧ್ಯತೆಯಿದೆ ಎಂದು ಪಿಟಿಐ ಮುಖಂಡರು ಆರೋಪಿಸಿದ್ದಾರೆ. ಇಮ್ರಾನ್ ಖಾನ್ ಬಂಧನದ ಕುರಿತು ಮುಂದಿನ ಕ್ರಮಕ್ಕಾಗಿ ಪಕ್ಷದ ಉಪಾಧ್ಯಕ್ಷ ಶಾ ಮೊಹಮ್ಮದ್ ಖುರೇಷಿ ನೇತೃತ್ವದಲ್ಲಿ ಆರು ಹಿರಿಯ ನಾಯಕರ ಸಮಿತಿಯನ್ನು ರಚಿಸಲಾಗಿದೆ.

ಇಸ್ಲಾಮಾಬಾದ್, ರಾವಲ್ಪಿಂಡಿ, ಲಾಹೋರ್, ಕರಾಚಿ, ಫೈಸಲಾಬಾದ್, ಗುಜ್ರಾನ್‌ವಾಲಾ, ಮುಲ್ತಾನ್, ಪೇಶಾವರ್ ಮತ್ತು ಮರ್ದಾನ್ ನಗರಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಪಿಟಿಐ ಕಾರ್ಯಕರ್ತರು ದೊಡ್ಡ ಮಟ್ಟದ ಆಂದೋಲನವನ್ನು ಆಯೋಜಿಸುತ್ತಿದ್ದಾರೆ. ಪ್ರತಿಭಟನೆಯ ಭಾಗವಾಗಿ, 25 ಪೊಲೀಸ್ ವಾಹನಗಳು ಮತ್ತು 14 ಸರ್ಕಾರಿ ಕಟ್ಟಡಗಳನ್ನು ಧ್ವಂಸಗೊಳಿಸಲಾಯಿತು. 130 ಪೊಲೀಸರು ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!