Thursday, September 11, 2025

ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿ: ಭಾರತಕ್ಕೆ ಮತ್ತೆ ಬೆದರಿಕೆ ಹಾಕಿದ ಅಮೆರಿಕ ಸಚಿವ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತವು ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಿದರೆ ಮಾತ್ರ ಹೆಚ್ಚಿನ ಸುಂಕ ಮತ್ತು ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲು ಸಾಧ್ಯ ಎಂದು ಅಮೆರಿಕ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ.

ಭಾರತ ರಷ್ಯಾದ ತೈಲ ಖರೀದಿಸುವುದನ್ನು ನಿಲ್ಲಿಸಿದಾಗ, ನಾವು ಅವರೊಂದಿಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಹೇಳಿದರು.

ಆದ್ರೆ ಇತ್ತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರನ್ನು ತಮ್ಮ ವಿಶೇಷ ಸ್ನೇಹಿತ ಎಂದು ಕರೆಯುತ್ತಿದ್ದರೆ, ಮತ್ತೊಂದೆಡೆ ಅವರ ಸಚಿವರು ಭಾರತಕ್ಕೆ ಬೆದರಿಕೆ ಹಾಕುತ್ತಿದ್ದಾರೆ.

ಹೊವಾರ್ಡ್ ಲುಟ್ನಿಕ್ ರಷ್ಯಾದ ತೈಲ ಖರೀದಿಸುವುದಕ್ಕಾಗಿ ಭಾರತವನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದ್ದಾರೆ. ಇತ್ತೀಚೆಗೆ, ಶೇಕಡಾ 50ರಷ್ಟು ಸುಂಕವನ್ನು ಎದುರಿಸುತ್ತಿರುವ ಭಾರತವು ಶೀಘ್ರದಲ್ಲೇ ಅಮೆರಿಕದ ಒತ್ತಡಕ್ಕೆ ಮಣಿಯುತ್ತದೆ ಎಂದು ಅವರು ಹೇಳಿದ್ದರು.

ಕಳೆದ ವಾರ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಅವರು, ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಯ ಮೇಜಿನ ಬಳಿ ಇರುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಭಾರತ ಕ್ಷಮೆಯಾಚಿಸುತ್ತದೆ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ರಾಜಿ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ