ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಪಾದಿತ ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷ ಶ್ಲಾಘಿಸಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಸಚಿವೆ ಅತಿಶಿ, ಬಿಜೆಪಿಯು ಇತರ ಪಕ್ಷಗಳ ವಿರುದ್ಧ ಪಿತೂರಿ ನಡೆಸುವುದನ್ನು ನಿಲ್ಲಿಸಬೇಕು ಮತ್ತು ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದರು.
“ಅರವಿಂದ ಕೇಜ್ರಿವಾಲ್ ಅವರಿಗೆ ರೂಸ್ ಅವೆನ್ಯೂ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ ಎಂದು ಬಿಜೆಪಿಗೆ ತಿಳಿದಿತ್ತು, ಅವರಿಗೆ ಸುಪ್ರೀಂ ಕೋರ್ಟ್‌ನಿಂದಲೂ ಜಾಮೀನು ಸಿಗುತ್ತದೆ ಎಂದು ಅವರಿಗೆ ತಿಳಿದಿದೆ. ಅದಕ್ಕಾಗಿಯೇ ಅವರು ಮತ್ತೊಂದು ಸಂಚು ರೂಪಿಸಿದರು” ಎಂದು ಅತಿಶಿ ವಾಗ್ದಾಳಿ ನಡೆಸಿದರು.