ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಲ್ಲಿಸಿ, ದುರ್ಗಾ ಪೂಜೆಯ ಕಡೆಗೆ ಗಮನ ಹರಿಸಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆ ನೀಡಿದ್ದಾರೆ.
ಸಿಎಂ ಹೇಳಿಕೆಗೆ ಕೋಲ್ಕತ್ತಾ ಪ್ರಕರಣದ ಮೃತ ಟ್ರೈನಿ ವೈದ್ಯೆಯ ತಾಯಿ ಮಮತಾ ಬ್ಯಾನರ್ಜಿಯವರ ವಿರುದ್ಧ ಆಕ್ರೋಶ ಹೊರಹಾಕಿದ್ದು, ನಾವು ನಮ್ಮ ಮಗಳ ಜೊತೆ ದ ಇನ್ಯಾವುದೇ ಹಬ್ಬ ಅಥವಾ ದುರ್ಗಾಪೂಜೆಯನ್ನು ಆಚರಣೆ ಮಾಡುವುದಿಲ್ಲ. ಅವರು ನಮ್ಮ ಮಗಳನ್ನು ಹಿಂದಿರುಗಿಸಲಿ. ಒಂದು ವೇಳೆ ಇದೇ ರೀತಿಯ ಘಟನೆ ಅವರ ಮನೆಯಲ್ಲಿಯೇ ಆಗಿದ್ದರೆ ಇದೇ ರೀತಿಯಾಗಿ ಹೇಳುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಆರ್‌ಜಿಕರ್ ಕಾಲೇಜಿನಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನಜಿ ಸೇರಿ ಪೊಲೀಸರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಶವವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ನಮಗೆ ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣವನ್ನು ನೀಡಿದರು.