ಬಾಣಂತಿಯರ ಸಾವು ನಿಲ್ಲಿಸಿ, ಬದುಕುವ ಗ್ಯಾರಂಟಿ ಕೊಡಿ: ಸರ್ಕಾರದ ವಿರುದ್ಧ ಅಶೋಕ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ನಡೆಯುತ್ತಿರುವ ಬಾಣಂತಿಯರ ಸರಣಿ ಸಾವಿನ ಬಗ್ಗೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೊಲೆಗೆ ಸಮ. ಇನ್ನೂ ಕೂಡ ಈ ಸರ್ಕಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಅನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನ್ಯಾಯಾಂಗ ತನಿಖೆ ಮತ್ತು ಬಾಣಂತಿಯರ ಸಾವಿನ ಸುತ್ತಲಿನ ಸಂದರ್ಭಗಳ ಪರಿಶೀಲನೆಯ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ. ಕಳಪೆ ಪರಿಹಾರ ನೀಡಿದ ಕಂಪನಿ ವಿರುದ್ಧ ದೆಹಲಿಗೆ ತೆರಳಿ ದೂರು ದಾಖಲಿಸುವುದಾಗಿ ಆರೋಗ್ಯ ಸಚಿವರು ಘೋಷಿಸಿದರು. ಆದರೆ ಇನ್ನೂ ಯಾಕೆ ಹೋಗಿ ದೂರು ನೀಡಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ. ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಆಗ್ರಹಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!