ಆರು ವಾರಗಳಲ್ಲಿ ಉಬರ್, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಆರು ವಾರಗಳಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ನಿಲ್ಲಿಸಲು ಕರ್ನಾಟಕ ಹೈಕೋರ್ಟ್ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಗಡುವು ನೀಡಿದೆ. ಜೊತೆಗೆ ಆರು ವಾರಗಳ ನಂತರ, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ರದ್ದಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಇಂದು ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.

ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 93 ಮತ್ತು ಅದರ ಅಡಿಯಲ್ಲಿರುವ ನಿಯಮಗಳ ಬಗ್ಗೆ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದ ಹೊರತು, ಅರ್ಜಿದಾರರು ಬೈಕ್ ಟ್ಯಾಕ್ಸಿ ಸೇವೆ ನೀಡಲು ಸಾಧ್ಯವಿಲ್ಲ ಮತ್ತು ಈ ಸಂಬಂಧ ಕರ್ನಾಟಕ ಸಾರಿಗೆ ಇಲಾಖೆಗೆ ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ನಿರ್ದೇಶನ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ವಿಚಾರಣೆಯ ಸಮಯದಲ್ಲಿ ನ್ಯಾಯಾಲಯ ನೀಡಿದ ಮಧ್ಯಂತರ ಆದೇಶದ ಆಧಾರದ ಮೇಲೆ ಓಲಾ, ಉಬರ್ ಮತ್ತು ರ್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಅಂಶದ ಬಗ್ಗೆ ನ್ಯಾಯಾಲಯದ ಗಮನ ಸೆಳೆದಾಗ, ನ್ಯಾಯಾಲಯವು ಇಂದಿನಿಂದ ಆರು ವಾರಗಳ ಕಾಲ ಕಾರ್ಯನಿರ್ವಹಿಸಲು ಅವರಿಗೆ ಅನುಮತಿ ನೀಡಿದೆ ಮತ್ತು ಆರು ವಾರಗಳ ನಂತರ ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಹೇಳಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!