JOB| ಸಾಫ್ಟ್​ವೇರ್ ಟೆಕ್ನಾಲಜಿ ಪಾರ್ಕ್ಸ್​ನಲ್ಲಿ ಭರ್ಜರಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಾಫ್ಟ್​ವೇರ್ ಟೆಕ್ನಾಲಜಿ ಪಾರ್ಕ್ಸ್​ ಆಫ್ ಇಂಡಿಯಾ (Software Technology Parks of India) ದಲ್ಲಿ ಖಾಲಿ ಇರುವ 29 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಸಿಸ್ಟೆಂಟ್, ಮೆಂಬರ್ ಟೆಕ್ನಿಕಲ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬಿಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಪಿಎಚ್.ಡಿ, CA ಅಥವಾ ICWA, ಬಿ.ಕಾಂ, ಎಂಬಿಎ, ಡಿಪ್ಲೊಮಾ ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವುದರ ಜೊತೆಗೆ ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 2,15,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 11,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!