ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಳೆಹೊನ್ನೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಒಂದೇ ದಿನ 11 ಮಂದಿ ಹುಚ್ಚು ನಾಯಿ ಕಡಿತಕ್ಕೆ ಒಳಗಾಗಿರುವ ಘಟನೆ ಆತಂಕ ಸೃಷ್ಟಿಸಿದೆ. ಗಾಯಾಳುಗಳೆಲ್ಲರಿಗೂ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾರ್ವಜನಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ನೂರಾರು ಬೀದಿ ನಾಯಿಗಳು ಹಿಂಡು ಹಿಂಡಾಗಿ ಸಂಚರಿಸುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡಲು ಭಯಪಡುವಂತಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಪದೇ ಪದೇ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಬೀದಿ ನಾಯಿಗಳನ್ನು ತಕ್ಷಣವೇ ಸೆರೆಹಿಡಿದು, ಪಟ್ಟಣದಿಂದ ದೂರವಿರುವ ಶೆಡ್‌ಗಳಿಗೆ ಸ್ಥಳಾಂತರಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.



