Friday, January 9, 2026

ಬೀದಿ ನಾಯಿಗಳ ಅಟ್ಟಹಾಸ: 3 ವರುಷದ ಮಗು ಮೇಲೆ 15 ನಾಯಿಗಳಿಂದ ಭೀಕರ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದಿ ನಾಯಿಗಳ ದಾಳಿ ದಿನೇ ದಿನೇ ಮಿತಿಮೀರುತ್ತಿದ್ದು, ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇತ್ತೀಚೆಗೆ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯಲ್ಲಿ, ಸುಮಾರು 15 ಬೀದಿ ನಾಯಿಗಳು ಕೇವಲ ಮೂರು ವರ್ಷದ ಬಾಲಕನ ಮೇಲೆ ಗಂಭೀರವಾಗಿ ಗಾಯಗೊಳಿಸಿವೆ. ಈ ಎದೆನಡುಗಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಬಾಲಕನ ಕಿರುಚಾಟ ಕೇಳಿ ಸ್ಥಳೀಯ ಮಹಿಳೆಯರು ತಕ್ಷಣವೇ ಧಾವಿಸಿ, ನಾಯಿಗಳ ಮೇಲೆ ಕಲ್ಲು ತೂರಿ ಬಾಲಕನನ್ನು ರಕ್ಷಿಸಿದ್ದಾರೆ. ರಕ್ತಸಿಕ್ತ ಸ್ಥಿತಿಯಲ್ಲಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ. ಬೀದಿ ನಾಯಿಗಳ ಈ ದಾಳಿ ನಾಗರಿಕರ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ.

error: Content is protected !!