ದೊಡ್ಡಬಳ್ಳಾಪುರದಲ್ಲಿ ಬೀದಿ ನಾಯಿ ಕಾಟ, 14 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೊಡ್ಡಬಳ್ಳಾಪುರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿನಾಯಿಗಳಿಂದ ಹಾವಳಿಗೊಳಗಾಗಿ ೧೪ ಮಂದಿ ಆಸ್ಪತ್ರೆ ಸೇರಿದ್ದಾರೆ.

ಟಿಬಿ ಸರ್ಕಲ್, ತಾಲೂಕು ಕಚೇರಿ ರಸ್ತೆ, ಕೋರ್ಟ್ ರಸ್ತೆ ಹಾಗೂ ಡಿಕ್ರಾಸ್‌ನಲ್ಲಿ ನಾಯಿಗಳು ಜನರ ಮೇಲೆ ದಾಳಿ ಮಾಡಿವೆ.

ಮಕ್ಕಳು ಹಾಗೂ ಪುರುಷರ ಮೇಲೆ ದಾಳಿಯಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕರು ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದು,ಈ ಸಮಸ್ಯೆಗೆ ಶೀಘ್ರ ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!