ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಉದಯಪುರದ ದರ್ಗಾವೊಂದರ ಬಳಿ ನಾಲ್ಕು ವರ್ಷದ ಬಾಲಕಿಯನ್ನು ಬೀದಿ ನಾಯಿ ಅಟ್ಯಾಕ್ ಮಾಡಿದೆ, ಪರಿಣಾಮ ಮಗು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ರೇಷ್ಮಾ ಎಂದು ಗುರುತಿಸಲಾದ ಪುಟ್ಟ ಬಾಲಕಿ ದರ್ಗಾ ಬಳಿ ತನ್ನ ತಂದೆಗಾಗಿ ಕಾಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಮೂಲದ ಕುಟುಂಬವು ರಂಜಾನ್ ಸಂದರ್ಭದಲ್ಲಿ ದರ್ಗಾಕ್ಕೆ ಭೇಟಿ ನೀಡಲು ಬಂದಿತ್ತು ಎಂದು ಅಂಬಾ ಮಾತಾ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ರಂಜೀತ್ ಸಿಂಗ್ ಹೇಳಿದ್ದಾರೆ.
ರೇಷ್ಮಾ ಮೇಲೆ ಬೀದಿನಾಯಿ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.