ಹೊಸದಿಗಂತ ಡಿಜಿಟಲ್ ಡೆಸ್ಕ್:
ಮತ್ತೆ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಇದೀಗ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಸಬಲಿಂಗಸಗೂರಿನಲ್ಲಿ ಬೀದಿನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ.
ಬಹಿರ್ದೆಸೆಗೆಂದು ಹೋಗಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.
ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.