ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3ಗೆ ಶನಿವಾರ ಚಾಲನೆ ದೊರೆಯಿತು.
ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿ ಅವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ ಗಣ್ಯರಿಗೆ ನೀಡುತ್ತಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು ಸೆಲಿಗೆ ಮುಗಿ ಬೀಳುತ್ತಿದ್ದರು.
ವಾರಾಂತ್ಯದ ಹಿನ್ನೆಲೆಯಲ್ಲಿ ಮೊದಲ ದಿನವೇ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬ ಸಮೇತ ಸೇರಿದ್ದ ಜನರು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಸಂಭ್ರಮಿಸಿದರು.
ಜ. 22ರ ವರೆಗೆ ಈ ಆಹಾರ ಉತ್ಸವ ಆಯೋಜಿಸಲಾಗಿದೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಉತ್ಸವಕ್ಕೆ ಚಾಲನೆ ದೊರೆಯಿತು.