ದೇಶದ ರಕ್ಷಣಾ ವ್ಯವಸ್ಥೆಗೆ ಬಲ: ಯಶಸ್ವಿಯಾಗಿ ನಡೆಯಿತು ಅಗ್ನಿ-3 ಖಂಡಾಂತರ ಕ್ಷಿಪಣಿ ಪರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಮಧ್ಯಂತರ ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಅಗ್ನಿ-3 ಅನ್ನು ಭಾರತ ಯಶಸ್ವಿಯಾಗಿ ನಡೆಸಿತು.

ಯಶಸ್ವಿ ಪರೀಕ್ಷೆಯು ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‌ಎಫ್‌ಸಿ) ಆಶ್ರಯದಲ್ಲಿ ನಡೆಸಲಾದ ವಾಡಿಕೆಯ ಬಳಕೆದಾರರ ತರಬೇತಿ ಉಡಾವಣೆಗಳ ಭಾಗವಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಈ ಮೂಲಕ ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ ಬಂದಂತೆ ಆಗಿದೆ.

ಈ ಉಡಾವಣೆ ಈ ಮೊದಲೇ ನಿರ್ಧರಿತ ವ್ಯಾಪ್ತಿಯವರೆಗೆ ನಡೆಸಲಾಯಿತು ಮತ್ತು ಎಲ್ಲಾ ಕಾರ್ಯಾಚರಣೆ ವ್ಯವಸ್ಥಿತವಾಗಿ ನಡೆದಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಅಗ್ನಿ-III ಅತ್ಯಾಧುನಿಕ ಮತ್ತು ನಿಖರವಾದ ಕ್ಷಿಪಣಿಗಳಲ್ಲಿ ಒಂದಾಗಿದೆ ಮತ್ತು ಈಗಾಗಲೇ ಸಶಸ್ತ್ರ ಪಡೆಗಳಿಗೆ ಸೇರ್ಪಡೆಗೊಂಡಿದೆ. ಇದು 1.5 ಟನ್ ತೂಕದ ಪೇಲೋಡ್ ಅನ್ನು 3,000 ಕಿಮೀಗಿಂತ ಹೆಚ್ಚು ದೂರಕ್ಕೆ ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!