ಹೊಸ ದಿಗಂತ ವರದಿ, ಅಂಕೋಲಾ:
ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶದ ಜನತೆಯ ಹಿತಕ್ಕಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಆದ್ಯ ಕರ್ತವ್ಯವಾಗಿದ್ದು ನರೇಂದ್ರ ಮೋದಿಯವರ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕಾರವಾರ ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಹೇಳಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕರಪತ್ರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದೇಶದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳು ದೇಶವನ್ನು ಗೌರವದಿಂದ ಕಾಣುವ ವಾತಾವರಣ ನಿರ್ಮಾಣ ಮಾಡುವ ಮೂಲಕ ಮಾದರಿ ಪ್ರಧಾನಿಗಳನ್ನು ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದ್ದು ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿಯವರ ಸಾಧನೆ ಮನೆ ಮನೆಗೆ ತಲುಪಿಸಬೇಕಿದೆ ಎಂದು ಕರೆ ನೀಡಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್ಟ, ಮಾರುತಿ ಗೌಡ
ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.