Sunday, December 10, 2023

Latest Posts

ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಮ್ಮ ಸರಕಾರ ರಾಜ್ಯದಲ್ಲಿ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ.ಆರೋಪ ಮಾಡುವುದೆಲ್ಲ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಉತ್ತರಿಸಿ, ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ಆದರೆ ಆ ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!