April 9, 2026
Thursday, April 9, 2026
spot_img

ಕಾಳಸಂತೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಮಾರಾಟದ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್‌ಪಿಜಿ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಶನಿವಾರ ಹೇಳಿದ್ದಾರೆ.

ಮದ್ಯ ಪ್ರಾಚ್ಯದಲ್ಲಿನ ಯುದ್ಧ ಸಂಘರ್ಷದಿಂದ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಇದರ ಬೆನ್ನಲ್ಲೇ ಅನಿಲ ಸಿಲಿಂಡರ್‌ಗಳ ಸಂಗ್ರಹ ಅಥವಾ ಕಾಳಸಂತೆ ಮಾರಾಟ ಹೆಚ್ಚಾಗುತ್ತಿದೆ.

ಈ ಕುರಿತು ಮಾತನಾಡಿದ ಗೃಹ ಸಚಿವರು, ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನಿಸಿದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಾಣಿಜ್ಯ ಅನಿಲ ಸಿಲಿಂಡರ್‌ಗಳಿಗೆ ಸಂಬಂಧಿಸಿದಂತೆ ಪೂರೈಕೆ ಸಮಸ್ಯೆಗಳಿವೆ. ಆದರೆ ಅಡಿಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಪ್ರಸ್ತುತ ಯಾವುದೇ ಸಮಸ್ಯೆಗಳಿಲ್ಲ ಎಂದು ಅವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !