ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವ ಪರಂಪರೆ ಪ್ರದೇಶವಾದ ಹಂಪಿಯ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಅನುಮತಿಯಿಲ್ಲದೇ ನಿರ್ಮಾಣ ಹಾಗೂ ಅಭಿವೃದ್ಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ರಮೇಶ್ ವಟಗಲ್ ತಿಳಿಸಿದ್ದಾರೆ.
ನಿಯಮಾವಳಿಗಳನ್ವಯ ಪ್ರಾಧಿಕಾರದ ಮಿತಿಯೊಳಗಿನ ಯಾವುದೇ ಕಟ್ಟಡ ನಿರ್ಮಾಣ, ಪುನರ್ ನಿರ್ಮಾಣ, ವಿಸ್ತರಣೆ ಅಥವಾ ಯಾವುದೇ ಅಭಿವೃದ್ದಿ ಚಟುವಟಿಕೆ ಪ್ರಾರಂಭಿಸುವ ಮುನ್ನ ಪ್ರಾಧಿಕಾರದ ಲಿಖಿತ ಅನುಮತಿಯನ್ನು ಪಡೆಯುವುದು ಕಡ್ಡಾಯವಾಗಿದೆ. ಅನುಮತಿಯಿಲ್ಲದೇ ನಡೆಯುವ ಯಾವುದೇ ನಿರ್ಮಾಣ ಕಾರ್ಯಗಳನ್ನು ಅನಧಿಕೃತ ಎಂದು ಪರಿಗಣಿಸಿ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.