ಹೊಸದಿಗಂತ ವರದಿ ಬೆಳಗಾವಿ:
ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವ ಹಾಗೂ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುವವರ ವಿರುದ್ಧ ಬೆಳಗಾವಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ನಗರದ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯ ತಾನಾಜಿ ಗಲ್ಲಿ ಬ್ರಿಡ್ಜ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹೊಂದಿದ್ದ ಆರೋಪದ ಮೇಲೆ ಅಭಿಷೇಕ ವಿನೋದ ಕೆಂಕರ (43) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:
ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಇಟ್ಟುಕೊಂಡಿರುವ ಬಗ್ಗೆ ಮಾಹಿತಿ ಪಡೆದ ಮಾರ್ಕೆಟ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಆರ್ಮ್ಸ್ ಆಕ್ಟ್ ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



