ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಯಮಗಳ ಉಲ್ಲಂಘಿಸಿದರೇ ದಂಡ ಪ್ರಕ್ರಿಯೆ ಸೇರಿದಂತೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

ಹೊಸ ದಿಗಂತ ವರದಿ, ಹಾವೇರಿ:

ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತೀವ್ರತರವಾಗಿ ಹೆಚ್ಚಳವಾಗುತ್ತಿದೆ ಕೋವಿಡ್ ಸೋಂಕಿನ ನಿಯಂತ್ರಣ, ಚಿಕಿತ್ಸೆಗೆ ವೈದ್ಯಕೀಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಸೋಂಕು ಹರಡದಂತೆ ಸಾರ್ವಜನಿಕರು ಸರ್ಕಾರದ ಕೋವಿಡ್ ನಿಯಮಗಳನ್ನು ಸ್ವಯಂ ಪ್ರೇರಣೆಯಿಂದ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸಿದರೇ ದಂಡ ಪ್ರಕ್ರಿಯೆ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದರು.
ಕೋವಿಡ್ ಎರಡನೇ ಅಲೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಹಿತ ಹಾಸಿಗೆ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ ಹಾವೇರಿ ತಾಲೂಕಿನ ಬಸಾಪೂರ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ. ಅಗತ್ಯಬಿದ್ದರೆ ರಾಣೆಬೆನ್ನೂರು ತಾಲೂಕಿನಲ್ಲೊಂದು ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಯೋಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 540 ಆಕ್ಸಿಜನ್ ಸಹಿತ ಬೆಡ್‌ಗಳ ವ್ಯವಸ್ಥೆ ಇದೆ. 950ಕ್ಕೂ ಹೆಚ್ಚು ಬೆಡ್‌ಗಳ ವ್ಯವಸ್ಥೆ ಹೊಂದಲಾಗಿದೆ. ತಾಲೂಕಾ ಆಸ್ಪತ್ರೆಗಳಲ್ಲಿ 190 ಜಂಬೋ ಆಕ್ಸಿಜನ್ ಸಿಲಿಂಡರ್ ವ್ಯವಸ್ಥೆ ಹೊಂದಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 6 ಕೆ.ಎಲ್ ಆಕ್ಸಿಜನ್ ಟ್ಯಾಂಕ್ ಅಳವಡಿಸಲಾಗಿದೆ. ಎಲ್ಲವೂಗಳ ಸುಸ್ಥಿತಿ ಕುರಿತು ಪರಿಶೀಲಿಸಲಾಗಿದೆ. ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದರು.

ಕೊರತೆ ಇಲ್ಲ
ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಕೊರತೆ ಇಲ್ಲ. ಅಗತ್ಯಕ್ಕೆ ತಕ್ಕಂತೆ ಲಸಿಕೆ ಬೆಳಗಾವಿಯಿಂದ ಪೂರೈಕೆಯಾಗುತ್ತಿದೆ. ಈಗಾಗಲೆ 1,11298 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಗುರುವಾರ 7 ಸಾವಿರ ಡೋಸ್ ಲಸಿಕೆ ಜಿಲ್ಲೆಗೆ ಪೂರೈಕೆಯಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಸರ್ಕಾರದ ನಿರ್ದೇಶನದಂತೆ ಲಸಿಕೆ ಹಾಕಲಾಗುತ್ತದೆ. ಈಗಾಗಲೇ ಶೇ.75 ರಷ್ಟು ಕೋವಿಡ್ ವಾರಿಯರ್‌ಗಳಿಗೆ ಲಸಿಕೆ ಹಾಕಲಾಗಿದೆ. ದಿನಕ್ಕೆ ೫ರಿಂದ 6 ಸಾವಿರ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ಆದರೇ ಬೇರೆ ಬೇರೆ ಕಾರಣಗಳಿಗಾಗಿ ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದರು.
ಗಂಭೀರ ಪರಿಸ್ಥಿತಿ ಇರುವ ಕೋವಿಡ್ ಪಾಜಿಟಿವ್ ರೋಗಿಗಳಿಗೆ ಮಾತ್ರ ರಮಿಡಿಸಿವರ್ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 510 ಡೋಸ್ ರಮಿಡಿಸಿವರ್ ಲಸಿಕೆ ದಾಸ್ತಾನಿದೆ. ಯಾವುದೇ ಕೊರತೆ ಇರುವುದಿಲ್ಲ ಹಾಗೂ ಸಾಮಾನ್ಯ ಜನರಿಗೆ ನೀಡುವ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ಸಹ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿ.ಪಂ ಸಿಇಒ ಮಹಮ್ಮದ ರೋಷನ್ ಮಾತನಾಡಿ, ಜಿಲ್ಲೆಯಲ್ಲಿ ಆರ್.ಟಿ.ಪಿ.ಸಿ.ಆರ್ ತಪಾಸಣೆ ಮಾತ್ರ ನಡೆಸಲಾಗುತ್ತಿದೆ. ಉಳಿದ ತಪಾಸಣೆಯನ್ನು ಕೈಬಿಡಲಾಗಿದೆ. ದಿನಕ್ಕೆ 1.5 ಸಾವಿರದಿಂದ 2 ಸಾವಿರ ಜನರ ವರೆಗೆ ಸರಾಸರಿ ಕೋವಿಡ್ ಪರಿಕ್ಷೇಗೆ ಒಳಪಡಿಸಲಾಗುತ್ತದೆ. ಪ್ರತಿ ತಾಲೂಕಿಗೆ 2 ಕೋವಿಡ್ ತಪಾಸಣಾ ತಂಡಗಳನ್ನು ರಚಿಸಲಾಗಿದೆ. ನಿತ್ಯ ತಾಲೂಕಾವಾರು 2ರಿಂದ 300 ರವರೆಗೆ ಸ್ಯಾಪಲ್‌ಗಳ ಸಂಗ್ರಹ ಮಾಡಲಾಗುತ್ತಿದೆ. ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದರು.

ದಂಡ ವಸೂಲಿ

ಕೋವಿಡ್ ತೀವ್ರತರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ವಯಂ ಜಾಗೃತರಾಗಿ ಸರ್ಕಾರ ಕೋವಿಡ್ -19 ನಿಯಮಗಳನ್ನು ಪಾಲಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಲ್ಲವಾದರೇ ಕಠಿಣ ಕ್ರಮ ಅನಿವಾರ್ಯ. ಮಾಸ್ಕ್ ಹಾಕದವರಿಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನಿರ್ಲಕ್ಷ್ಯ ವಹಿಸಿದವರಿಗೆ ದಂಡ ಹಾಕಲಾಗುವುದು. ಹಾವೇರಿ, ರಾಣೆಬೆನ್ನೂರು ನಗರಗಳಲ್ಲಿ 200ರೂಗಳು, ಉಳಿದ ಪಟ್ಟಣಗಳಲ್ಲಿ 100ರೂಗಳು ದಂಡ ಹಾಕಲು ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಅಧಿಕಾರ ನೀಡಲಾಗಿದೆ ಎಂದರು.
ಮಾಧ್ಯಮಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ, ಡಾ.ಜಗದೀಶ, ಡಾ,.ವಿರಕ್ತಿಮಠ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss