ಹೊಸದಿಗಂತ ಡಿಜಿಟಲ್ ಡೆಸ್ಕ್:
ಈದ್ ಮಿಲಾದ್ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಆದ ಗಲಭೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹಗಳನ್ನು ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದಾರೆ.
ಬೇರೆ ರಾಜ್ಯದ ವಿಡಿಯೋಗಳನ್ನು ಶಿವಮೊಗ್ಗದ ವಿಡಿಯೋ ಎಂದು ಹೇಳಿ ಶೇರ್ ಮಾಡಲಾಗ್ತಿದೆ. ಈ ರೀತಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವಿಡಿಯೋಗಳನ್ನು ನಂಬಬೇಡಿ. ಆತಂಕ ಎದುರಾಗುವ ಪರಿಸ್ಥಿತಿ ಇಲ್ಲ ಎಂದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ನಿಮ್ಮ ಫೋನ್‌ಗೂ ಬರಬಹುದು, ಅದನ್ನು ಇನ್ನೊಬ್ಬರಿಗೆ ಫಾರ್ವರ್ಡ್ ಮಾಡಬೇಡಿ ಇದು ಆತಂಕ ಸೃಷ್ಟಿಮಾಡಲು ಕಿಡಿಗೇಡಿಗಳು ಮಾಡುತ್ತಿರುವ ಕೆಲಸ ಎಂದಿದ್ದಾರೆ.