ಹೊಸದಿಗಂತ ವರದಿ, ಮೈಸೂರು:
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಜಿಲ್ಲೆಯ ಉನ್ನತಾಧಿಕಾರಿಗಳ ಸಭೆ ನಡೆಸಿದರು.
ಸೋಂಕಿತರು ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್‌ಗೆ ದಾಖಲಾಗುವ ಪರಿಸ್ಥಿತಿ ಕಡಿಮೆ ಇದೆ. ಹೋಂ ಐಸೋಲೇಷನ್ ಹೆಚ್ಚಿದೆ. ಹೋಂ ಐಸೋಲೇಷನ್‌ನಲ್ಲಿರುವ ಪೊಲೀಸರು, ಶಿಕ್ಷಕರು, ವಿದ್ಯಾರ್ಥಿಗಳಿಗೆ, ಶಾಲೆಗಳಿಗೆ, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರಿಗೂ ಕೋವಿಡ್ ಚಿಕಿತ್ಸಾ ಕಿಟ್‌ಗಳನ್ನು ಕಡ್ಡಾಯವಾಗಿ ತಲುಪಿಸಬೇಕು ಎಂದು ಸೂಚನೆ ನೀಡಿದರು.
ಕೋವಿಡ್ ಹರಡುವಿಕೆ ಈಗ ಹೆಚ್ಚಾಗಿದೆ. ಈ ಪ್ರಮಾಣ ಕಡಿಮೆಯಾಗುವ ವರೆಗೂ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಬೇಕು. ಯಾವ ಕಾರಣಕ್ಕೂ ನಿರ್ಲಕ್ಷ್ಯವಹಿಸಬಾರದು ಎಂದು ತಿಳಿಸಿದರು.
ಕಳೆದ ಮೂರು ದಿನದಿಂದ ಸರಾಸರಿ 4 ಸಾವಿರ ಕೇಸ್ ಬಂದಿವೆ. ಬ್ಯಾಕ್ ಲಾಕ್ ಆಗಿದ್ದರಿಂದ ಕೇಸ್ ಗಳ ಸಂಖ್ಯೆ ಹೆಚ್ಚಾಗಿದೆ. 7 ಸಾವಿರ ಕೇಸ್ ಬ್ಯಾಕ್ ಲಾಕ್ ಮುಗಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಇನ್ನೂ 10 ದಿನ 1500 ರಿಂದ 2000 ಕೇಸ್ ಬರುತ್ತದೆ ಎನ್ನಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ಸಿದ್ಧವಾಗಿದೆ. ನಿತ್ಯ 6 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಲಕ್ಷಣಗಳು ಇರುವವರಿಗೆ ಹಾಗೂ ಅವರ ಪ್ರಾಥಮಿಕ ಸಂಪರ್ಕದಲ್ಲಿ ಇರುವವರಿಗೆ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹೆಚ್.ಡಿ.ಕೋಟೆಯಲ್ಲಿ ಆಕ್ಸಿಜನ್ ಘಟಕ ಆರಂಭದ ಕುರಿತು ಸಿಎಂ ಜೊತೆ ಚರ್ಚೆಯಾಗಿದೆ. ಶುಕ್ರವಾರ ಆರಂಭವಾಗಲಿದೆ. ಉಳಿದಂತೆ ಎಲ್ಲಾ ತಾಲೂಕುಗಳಲ್ಲಿ ಆಕ್ಸಿಜನ್ ಘಟಕಗಳು ಇವೆ