ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಕೊರೋನಾ ನೈಟ್ ಕರ್ಫ್ಯೂ ವನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇವಲ ಕೊರೋನಾ ನೈಟ್ ಕರ್ಫ್ಯೂ ಮಾತ್ರವಲ್ಲದೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರ ಬಗ್ಗೆ ಹೆಚ್ಚು ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸಾರ್ವಜನಿಕರು ಕೊರೋನಾ ನಿಯಂತ್ರಿಸಲು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು. ಏ.18ರಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸರ್ವಪಕ್ಷ ಸಭೆ ಕರೆದಿದ್ದು, ಎಲ್ಲಾ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.