ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ನಾಳೆಯಿಂದ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗುತ್ತಿದ್ದು, ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರುವುದು ಉಸ್ತುವಾರಿ ಸಚಿವರ ಜವಾಬ್ದಾರಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತುಕತೆ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ಕೊರೋನಾ ತಡೆಯುವ ನಿಟ್ಟಿನಲ್ಲಿ ನಾವು ಮಾಡು ಇಲ್ಲವೇ ಮಡಿ ಎನ್ನುವ ಸ್ಥಿತಿಯಲ್ಲಿದ್ದೇವೆ. ಕಂಪ್ಲೀಟ್ ಲಾಕ್ ಡೌನ್ ಕೊನೇ ಅಸ್ತ್ರ. ನಾಳೆಯಿಂದ 14 ದಿನಗಳ ಕಾಲ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೆ ಬರಬೇಕು ಎಂದು ಹೇಳಿದರು.
ಈ ಬಾರಿ ಎಡವಿದರೆ ಬೆಲೆ ತೆರಬೇಕಾಗುತ್ತದೆ. ಅನಗತ್ಯವಾಗಿ ಜನರು ಓಡಾಡಬಾರದು. ಲಾಕ್ ಡೌನ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಜಿಲ್ಲೆಗಳಲ್ಲಿ ಬಿಗಿ ಕ್ರಮ ಜಾರಿಗೆ ಬರುವಂತೆ ಮಾಡುವುದು ಸಚಿವರ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದ್ದಾರೆ