July 23, 2026
Thursday, July 23, 2026
spot_img

ಪರೀಕ್ಷಾ ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ: ವಿಪಕ್ಷಗಳ ನಡೆಗೆ ಜೋಶಿ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ತ್ವರಿತವಾಗಿ ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಆರಂಭಿಸುವ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಯುವಜನತೆಯ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧ

ಪರೀಕ್ಷಾ ಅಕ್ರಮಗಳ ವಿಷಯವಾಗಿ ಸಂಸತ್ತಿನಲ್ಲಿ ಮುಕ್ತವಾಗಿ ಮಾತನಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಆರಂಭದಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ವಿರೋಧ ಪಕ್ಷದ ನಾಯಕರು, ಈಗ ನಾನಾ ಷರತ್ತುಗಳನ್ನು ಒಡ್ಡುತ್ತಾ ಚರ್ಚೆಯಿಂದ ಕಾಲು ಕಳೆಯುತ್ತಿದ್ದಾರೆ ಎಂದು ಸಚಿವರು ವಾಗ್ದಾಳಿ ನಡೆಸಿದರು.

14 ಪ್ರಮುಖ ಆರೋಪಿಗಳ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ‘ವಿಕಸಿತ ಭಾರತ 2047’ ತಲುಪಲು ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರ ಸೂಕ್ತ ಸಲಹೆಗಳನ್ನು ಸ್ವೀಕರಿಸಿ ಅಕ್ರಮ ನಿಯಂತ್ರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಜೋಶಿ ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !