Sunday, April 11, 2021

Latest Posts

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸಿ: ಅಧಿಕಾರಿಗಳಿಗೆ ಎಡಿಸಿ ಸೂಚನೆ

ಹೊಸದಿಗಂತ ವರದಿ, ಮಂಡ್ಯ:

ಮಂಡ್ಯ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಕ್ರಿಯಾ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶ, ನಗರ ಪ್ರದೇಶಗಳಲ್ಲಿ ಬಾಲಕಾರ್ಮಿಕ ಪದ್ದತಿ ವಿರುದ್ಧ ಜನಜಾಗೃತಿ ಮೂಡಿಸಬೇಕು. ಕಾನೂನು ಉಲ್ಲಂಘನೆಯಿಂದ ಎದುರಿಸಬೇಕಾದ ಕಾನೂನು ಕ್ರಮಗಳ ಕುರಿತು ಜನಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.

ಬಾಲ ಕಾರ್ಮಿಕ ಪದ್ಧತಿ ಕಾಯ್ದೆಯನ್ವಯ 14ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ, ಕೈಗಾರಿಕೆ ಹಾಗೂ ಅಪಾಯಕಾರಿಯಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಅಂತಹ ಮಕ್ಕಳನ್ನು ಕೆಲಸದ ಸ್ಥಳದಿಂದ ಮುಕ್ತಿಗೊಳಿಸಿ ಅಥವಾ ಬಿಡುಗಡೆಗೊಳಿಸಿ ಬಾಲ ಕಾರ್ಮಿಕ ವಿಶೇಷ ವಸತಿ ಶಾಲೆಯ ಮೂಲಕ ಮಕ್ಕಳಿಗೆ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಿ ಎಂದರು.

ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ಸಲುವಾಗಿ ಬಸ್ ನಿಲ್ದಾಣಗಳಲ್ಲಿ ಪ್ರಚಾರ ಕಾರ್ಯಕ್ರಮ, ಶಾಲಾ-ಕಾಲೇಜುಗಳಲ್ಲಿ, ಬಾಲಕಾರ್ಮಿಕ ಪದ್ಧತಿಯ ಕುರಿತಂತೆ ಗೋಡೆಬರಹ, ಜಾಥಾ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಇನ್ನೂ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss