ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂತಾರ ಚಾಪ್ಟರ್ 1’ ಹಾಗೂ ‘ಟಾಕ್ಸಿಕ್’ ಸಿನಿಮಾಗಳ ಶೂಟಿಂಗ್ ವೇಳೆ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ‘ಟಾಕ್ಸಿಕ್’ ತಂಡದವರು ಮರ ಕಡಿದ ಆರೋಪ ಹೊತ್ತರೆ, ‘ಕಾಂತಾರ’ ತಂಡದವರು ಬಾಂಬ್ ಸ್ಫೋಟ್ ಮಾಡಿದ ಹಾಗೂ ಅರಣ್ಯದಲ್ಲಿ ಬೆಂಕಿ ಹಚ್ಚಿದ ಆರೋಪ ಎದುರಿಸಿದರು. ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.
ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಇದು ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದಿಂದ ಅನುಮತಿ ಪಡೆಯಲೇಬೇಕು.