Wednesday, December 6, 2023

Latest Posts

ಸರಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ: ಕೆ.ಜಿ.ಬೋಪಯ್ಯ ಸೂಚನೆ

ಹೊಸದಿಗಂತ ವರದಿ, ಕೊಡಗು:
ಕೋವಿಡ್ ಸಂಬಂಧದ ಸರ್ಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೊರೋನಾ ವೈರಸ್ ಸಂಬಂಧಿಸಿದಂತೆ ಯಾವುದೇ ರೀತಿಯ ಉದಾಸೀನ ಮಾಡದೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಶಾಸಕ ಕೆ.ಜಿ.ಬೋಪಯ್ಯ ಅವರು ಸೂಚಿಸಿದರು.
ನಗರದ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಮಡಿಕೇರಿ ತಾಲೂಕಿನ ವಿವಿಧ ಗ್ರಾ.ಪಂ.ಗಳ ಕೋವಿಡ್ ನಿಯಂತ್ರಣ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹರೆಲ್ಲರೂ ಕೋವಿಡ್ ನಿಯಂತ್ರಣ ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಮನವರಿಕೆ ಮಾಡಬೇಕೆಂದೂ ಕೆ.ಜಿ.ಬೋಪಯ್ಯ ಸಲಹೆ ಮಾಡಿದರು.
ಸಭೆಯಲ್ಲಿ ಜಿ.ಪಂ.ಉಪಕಾರ್ಯದರ್ಶಿ ಪಿ.ಲಕ್ಷ್ಮಿ, ತಾ.ಪಂ.ಇಒ ಶೇಖರ್, ತಹಶೀಲ್ದಾರ್ ಮಹೇಶ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!