ಮುಷ್ಕರ ವಾಪಾಸ್: ಸರ್ಕಾರಿ ನೌಕರರಿಗೆ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ( Chief Minister Basavaraj Bommai) ಧನ್ಯವಾದ ತಿಳಿಸಿದ್ದಾರೆ.

ಚಾಮರಾಜನಗರದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಶೇ.17ರಷ್ಟು ಮೂಲ ವೇತನ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ ಮೇಲೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ. ಸರ್ಕಾರಕ್ಕೆ ನೌಕರರು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಇದಕ್ಕಾಗಿ ಸರ್ಕಾರಿ ನೌಕರರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇ.17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!