Monday, July 4, 2022

Latest Posts

ಬ್ಯಾಂಕ್ ಗಳ ಖಾಸಗೀಕರಣ ಕ್ರಮವನ್ನು ಖಂಡಿಸಿ ಎರಡು ದಿನಗಳ ಕಾಲ ಮುಷ್ಕರ

ಹೊಸದಿಗಂತ ವರದಿ, ಕಲಬುರಗಿ:

ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕೆನರಾ ಬ್ಯಾಂಕ್ ಅಸೋಸಿಯೇಷನ್ (CBOA) ಮತ್ತು ಆಲ್ ಇಂಡಿಯಾ ನ್ಯಾಷನಲೈಜ್ ಬ್ಯಾಂಕ್ ಫೆಡ್ರೆಶನ್ (AINBOF) ವತಿಯಿಂದ ಡಿ,16 ಮತ್ತು 17 ರಂದು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ ಎಂದು ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸತೀಶ್ ಚವ್ಹಾಣ ತಿಳಿಸಿದ್ದಾರೆ.
ನಗರದ ಸುಪರ್ ಮಾಕೇ೯ಟ,ನ ಕೆನರಾ ಬ್ಯಾಂಕ್ ಎದುರಿಗೆ ಮುಷ್ಕರ ನಡೆಸಿ, 2021-22ರ ಬಜೆಟ್‌ನಲ್ಲಿ ಸರ್ಕಾರವು ಈ ವರ್ಷದಲ್ಲಿ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಖಾಸಗೀಕರಣವನ್ನು ತೆಗೆದುಕೊಳ್ಳುವ ಉದ್ದೇಶವನ್ನು ಘೋಷಿಸಿದೆ ಎಂದರು.
ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸಿದರೆ, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿನ ಬ್ಯಾಂಕ್ ಶಾಖೆಗಳನ್ನು ಮುಚ್ಚುವ ಸಂದರ್ಭ ಎದುರಾಗಬಹುದು ಮತ್ತು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾದ ಎಲ್ಲಾ ಸರ್ಕಾರಿ ಯೋಜನೆಗಳ ಅನುಷ್ಠಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬ್ಯಾಂಕ್ ಖಾಸಗೀಕರಣ ಮಸೂದೆಯನ್ನು (ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ, 2021) ಮಂಡಿಸುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದರೆ, ಮುಷ್ಕರವನ್ನು ಮರುಪರಿಶೀಲಿಸಲು ನಾವು ಒಲವು ತೋರುತ್ತೇವೆ. ಆದರೆ ಸರ್ಕಾರ ಈ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದರು.
ಈ ಸಂದರ್ಭದಲ್ಲಿ ವೇಣುಗೋಪಾಲ್ ಸಿಂಗ್, ದೀಪಿಕಾ, ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss