ಲೀಸೆಸ್ಟರ್‌ ಹಿಂಸಾಚಾರ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಿಂದ ತೀವ್ರ ಖಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುನೈಟೆಡ್ ಕಿಂಗ್‌ಡಮ್‌ನ ಲೀಸೆಸ್ಟರ್‌ನಲ್ಲಿ ಭಾರತೀಯ ಸಮುದಾಯಗಳ ಮೇಲೆ ನಡೆದ ಹಿಂಸಾಚಾರವನ್ನು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ತೀವ್ರವಾಗಿ ಖಂಡಿಸಿದೆ.

ಲೀಸೆಸ್ಟರ್‌ನಲ್ಲಿ ಇಸ್ಲಾಮಿಸ್ಟ್‌ಗಳು ಹಿಂದೂ ಚಿಹ್ನೆಗಳು, ಆವರಣಗಳನ್ನು ಧ್ವಂಸಗೊಳಿಸಿದ್ದಾರೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿರುವವ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಿ ಹಾಗೂ ಹಿಂಸಾಚಾರದ ಸಂತ್ರಸ್ತರಿಗೆ ರಕ್ಷಣೆ ನೀಡಿ ಎಂದು ಎಚ್‌ಸಿಐ ಅಧಿಕಾರಿಗಳಿಗೆ ಆದೇಶಿಸಿದೆ.

ಏನಿದು ಲೀಸೆಸ್ಟರ್ ಹಿಂಸಾಚಾರ?
ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ವೇಳೆ ಲೀಸೆಸ್ಟರ್‌ನಲ್ಲಿ ನೆಲೆಸಿದ್ದ ಭಾರತೀಯರು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಇದರಿಂದ ಆಕ್ರೋಶಗೊಂಡ ಇಸ್ಲಾಮಿಸ್ಟ್ ಗುಂಪು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಭಾರತೀಯರ ಮೇಲೆ ಹಲ್ಲೆ ನಡೆಸಿದೆ. ಇದಾದ ಒಂದು ವಾರದ ನಂತರವೂ ಹಿಂಸಾಚಾರ ಮುಂದುವರಿದಿದ್ದು, ಇದೀಗ ಹಿಂದೂ ಚಿಹ್ನೆಗಳನ್ನು ಧ್ವಂಸಗೊಳಿಸಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ 27 ಮಂದಿಯನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!