ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ನವೆಂಬರ್ 21ರಂದು ಪ್ರಬಲ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ.
ಇದೀಗ ಭೂಕಂಪನದಿಂದ ಮೃತಪಟ್ಟವರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ, ಕಳೆದೊಂದು ವಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಲೇ ಇದೆ. ಇದೀಗ ಏಳು ವರ್ಷದ ಇಂಡೋನೇಷ್ಯಾದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
ಭೂಕಂಪನದಿಂದ ಉಂಟಾದ ಭೂಕುಸಿತದಿಂದ ಟನ್‌ಗಟ್ಟಲೆ ಮಣ್ಣು, ಬಂಡೆಗಳು ಮತ್ತು ಮುರಿದ ಮರಗಳ ತುಂಡುಗಳನ್ನು ಹೊರತೆಗೆಯಲಾಗಿದೆ. 2000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
1400ಕ್ಕೂ ಹೆಚ್ಚು ರಕ್ಷಕರಿ ಅವಶೇಷಗಳಡಿ ಸಿಲುಕಿರುವವರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭೂಕಂಪನದಿಂದ ಈಗಾಗಲೇ 56 ಸಾವಿರ ಮನೆಗಳಿಗೆ ಹಾನಿಯಾಗಿದೆ, 36 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.