ಜಪಾನ್‌ನಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 13ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಪಾನ್‌ನಲ್ಲಿ ಒಂದೇ ದಿನ 155 ಬಾರಿ ಭೂಕಂಪನ ಸಂಭವಿಸಿದ್ದು, ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಹೊಸ ವರ್ಷದಂದು ಭೂಕಂಪ ಸಂಭವಿಸಿದ್ದು, ಅಪಾರ ಪ್ರಮಾಣದ ನೋವಿಗೆ ಕಾರಣವಾಗಿದೆ. ಇಶಿವಾಕಾದ ಕರಾವಳಿ ಪ್ರಾಂತ್ಯದಲ್ಲಿಒಂದು ಮೀಟರ್‌ನಷ್ಟು ಎತ್ತರದ ಅಲೆಗಳು ಬಡಿಯುತ್ತಿವೆ. ಇವು 5 ಮೀಟರ್‌ವರೆಗೂ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಭೂಕಂಪನದ ತೀವ್ರತೆಗೆ ರಸ್ತೆಗಳು ಬಿರುಕುಬಿಟ್ಟಿದ್ದು, ಕಟ್ಟಡಗಳು ಧರೆಗುರುಳಿವೆ. ಮೂವತ್ತು ಸಾವಿರಕ್ಕೂ ಹೆಚ್ಚು ಮಂದಿ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!