Thursday, March 30, 2023

Latest Posts

ಈಕ್ವೆಡಾರ್‌ನಲ್ಲಿ ವಿಧ್ವಂಸ ಸೃಷ್ಟಿಸಿದ ಭಾರೀ ಭೂಕಂಪ: ನೆಲಕಚ್ಚಿದ ಮನೆಗಳು, 14 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಅಮೆರಿಕಾದ ಈಕ್ವೆಡಾರ್ ಮತ್ತು ಉತ್ತರ ಪೆರು ದೇಶಗಳಲ್ಲಿ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.7ರಷ್ಟು ದಾಖಲಾಗಿದೆ. ಭೂಕಂಪದ ಕೇಂದ್ರವು ಗುಯಾಸ್‌ನಿಂದ ದಕ್ಷಿಣಕ್ಕೆ 80 ಕಿ.ಮೀ.ತೋರಿಸಿದೆ. ಭೂಕಂಪನದಿಂದಾಗಿ ನಗರದ ಹಲವೆಡೆ ಮನೆಗಳು ನೆಲಸಮವಾಗಿವೆ. ಈ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಈಕ್ವೆಡಾರ್ ಅಧ್ಯಕ್ಷ ಗಿಲ್ಲೆರ್ಮೊ ಲಾಸ್ಸೊ ಅವರು, ಜನರು ಆತಂಕಪಡಬೇಡಿ, ರಕ್ಷಣಾ ತಂಡಗಳು ಪರಿಹಾರ ಕ್ರಮಗಳನ್ನು ಕೈಗೊಂಡಿವೆ ಎಂದು ಧೈರ್ಯ ತುಂಬಿದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧ್ಯಕ್ಷರ ಕಚೇರಿ ಖಚಿತಪಡಿಸಿದೆ.

ಭೂಕುಸಿತದಿಂದಾಗಿ ಹಲವು ಪ್ರದೇಶಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಲಾಗಿದೆ ಮತ್ತು ಅನೇಕ ಮನೆಗಳು, ಶಾಲಾ ಕಟ್ಟಡಗಳು ಮತ್ತು ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಕ್ಯುಂಕಾ ನಗರದಲ್ಲಿ ಕಾರಿನ ಮೇಲೆ ಗೋಡೆ ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದರೆ, ಜಾಂಬೆಲಿ ದ್ವೀಪದಲ್ಲಿ ಗೋಪುರ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಅದೇ ರೀತಿ, ಮನಾಬಿ, ಮಾಂಟಾ ಮತ್ತು ರಾಜಧಾನಿ ಕ್ವಿಟೊ ಸೇರಿದಂತೆ ಅನೇಕ ನಗರಗಳು ಸಹ ಭೂಕಂಪದಿಂದ ಪ್ರಭಾವಿತವಾಗಿವೆ. ಈ ಅವಘಡದಲ್ಲಿ ಇದುವರೆಗೆ 14 ಮಂದಿ ಸಾವನ್ನಪ್ಪಿದ್ದು, ಈಕ್ವೆಡಾರ್‌ನಲ್ಲಿ 13 ಜನರು ಮತ್ತು ಪೆರುವಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

2016ರ ನಂತರ ಈಕ್ವೆಡಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2016 ರ ಭೂಕಂಪದಲ್ಲಿ ಸುಮಾರು 700 ಜನರು ಸಾವನ್ನಪ್ಪಿ, ಸಾವಿರಾರು ಜನರು ಗಾಯಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!