ಇಸ್ತಾನ್‌ಬುಲ್‌ ನಲ್ಲಿ ಪ್ರಬಲ ಸ್ಫೋಟ: 4 ಮಂದಿ ಸಾವು, 38 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟರ್ಕಿಯ ಇಸ್ತಾನ್‌ಬುಲ್‌ನ ಹೃದಯಭಾಗದಲ್ಲಿರುವ ಜನನಿಬಿಡ ರಸ್ತೆಯಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 38 ಜನರು ಗಾಯಗೊಂಡಿದ್ದಾರೆ.

ಇಸ್ತಿಕ್‌ಲಾಲ್ ಸ್ಟ್ರೀಟ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು 38 ಜನರು ಗಾಯಗೊಂಡಿದ್ದಾರೆ ಎಂದು ಇಸ್ತಾಂಬುಲ್ ಗವರ್ನರ್ ಅಲಿ ಯೆರ್ಲಿಕಾಯಾ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇಸ್ತಿಕ್‌ಲಾಲ್ ಶಾಪಿಂಗ್ ಸ್ಟ್ರೀಟ್‌ನಲ್ಲಿ ಸಂಜೆ 4:00 (1300 GMT) ನಂತರ ಸ್ಪೋಟ ಸಂಭವಿಸಿದೆ. ಸ್ಫೋಟ ಸಂಭವಿಸಿದ ಕಾರಣ ಇನ್ನೂ ತಿಳಿದಿಲ್ಲ. ಇಸ್ತಿಕ್ ಲಾಲ್ ಶಾಪಿಂಗ್ ಸ್ಟ್ರೀಟ್ ಸಾಕಷ್ಟು ಅಂಗಡಿಗಳು ಮತ್ತು ರೆಸ್ಟೋರೆಂಟ್‌ಗಳಿಂದ ಕೂಡಿದ. ಇಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರು ಸಾಮಾನ್ಯವಾಗಿ ಕಿಕ್ಕಿರಿದು ಸೇರಿರುತ್ತಾರೆ. ಹೀಗಾಗಿ ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!