ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವ ಬದಲು ಶಾಲೆಗೆ ಚಕ್ಕರ್ ಹಾಕಿ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಬೇಕು, ಇದಲ್ಲದೆ ಇತರ ಕಂಪನಿಗಳು ಅಥವಾ ಸಂಸ್ಥೆಗಳಲ್ಲಿ ಗುರುತಿಸಿಕೊಂಡರೆ, ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಬೆಳಗಾವಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಶಿಕ್ಷಕರು ತಮ್ಮ ಇಷ್ಟಾರ್ಥ ಈಡೇರಿಸಿಕೊಳ್ಳಲು ಪ್ರತಿಭಟನೆ ನಡೆಸುವುದರಲ್ಲಿ ತಪ್ಪೇನಿಲ್ಲ, ಪ್ರತಿಭಟನೆ ಮಾಡುವ ಹಕ್ಕು ಅವರಿಗಿದೆ. ಅವರು ವಿವಿಧ ಕಾರಣಗಳಿಗಾಗಿ ಶಾಲೆಯಿಂದ ದೂರ ಉಳಿದು ಮಕ್ಕಳಿಗೆ ಸಮಸ್ಯೆ ಉಂಟು ಮಾಡುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮೊದಲು ಸರಕಾರಿ ಶಾಲೆಯ ಶಿಕ್ಷಕರಿಗೆ ಈ ಕಾನೂನು ಲಾಗು ಮಾಡಿ ಎಲ್ಲರೂ ಅಲ್ಲ ಕೆಲವರು ಶಾಲೆಗೆ ಹೋಗದೆ ಸಂಬಳ ತೆಗೆದುಕೊಳ್ಳುತ್ತಾರೆ
ಮೊದಲು ಸರಕಾರಿ ಶಾಲೆಯ ಶಿಕ್ಷಕರಿಗೆ ಈ ಕಾನೂನು ಲಾಗು ಮಾಡಿ ಎಲ್ಲರೂ ಅಲ್ಲ ಕೆಲವರು ಶಾಲೆಗೆ ಹೋಗದೆ ಸಂಬಳ ತೆಗೆದುಕೊಳ್ಳುತ್ತಾರೆ
A good initiative
A good initiative from higher authorities