ಹೊಸದಿಗಂತ ವರದಿ ವೀರಾಜಪೇಟೆ:
ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಬೀಸಿದ ಗಾಳಿ ಮಳೆಗೆ ಮರದ ಕೊಂಬೆ ಬಿದ್ದ ಪರಿಣಾಮ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಫಿ ಬೆಳೆಗಾರ ಪೊನ್ನಚoಡ ವಿಷ್ಣು ಬೆಳ್ಳಿಯಪ್ಪ( 64) ಎಂಬವರು ಸಾವಿಗೀಡಾಗಿದ್ದಾರೆ.
ಬೆಳಗ್ಗೆ ಮನೆಯಿಂದ ಹೊರ ಬರುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದು, ತಲೆಗೆ ಗಂಭೀರ ಗಾಯಗೊಂಡ ವಿಷ್ಣು ಅವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾದರು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶನಿವಾರ ಸಂಜೆ ವೀರಾಜಪೇಟೆ ಸಮೀಪದ ಆರ್ಜಿ ಗ್ರಾಮದಲ್ಲಿ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು.