August 24, 2026
Monday, August 24, 2026
spot_img

ರಚನಾತ್ಮಕ ಸುಧಾರಣೆಗಳೇ ಆರ್ಥಿಕತೆಯ ಶಕ್ತಿ: ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬಜೆಟ್ ಮಂಡನೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರದ ಮುಂದಿನ ದೃಷ್ಟಿಕೋನವನ್ನು ಹಂಚಿಕೊಂಡರು.

“ನಾವು ಕೇವಲ ಯೋಜನೆಗಳನ್ನು ಘೋಷಿಸುತ್ತಿಲ್ಲ, ಬದಲಾಗಿ ದೇಶದಲ್ಲಿ ಹೂಡಿಕೆ ಮತ್ತು ಬೆಳವಣಿಗೆಗೆ ಪೂರಕವಾದ ಒಂದು ಸುಸ್ಥಿರ ವ್ಯವಸ್ಥೆಯನ್ನು ರೂಪಿಸುತ್ತಿದ್ದೇವೆ,” ಎಂದು ಅವರು ಹೇಳಿದರು.

ಕೃಷಿ, ಮೂಲಸೌಕರ್ಯ ಮತ್ತು ಕೈಗಾರಿಕಾ ವಲಯಗಳಲ್ಲಿ ತರಲಿರುವ ಬದಲಾವಣೆಗಳು ಭಾರತವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸಲಿವೆ. ತೆರಿಗೆ ಸುಧಾರಣೆ ಮತ್ತು ಸುಲಭ ಜೀವನ ಕ್ರಮಗಳು ಈ ‘ಎಕೋಸಿಸ್ಟಮ್’ನ ಭಾಗವಾಗಿವೆ ಎಂದು ಅವರು ವಿವರಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !