ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿ ಮಾಡಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರು ನಮ್ಮಿಂದ ನ್ಯಾಯಕ್ಕಾಗಿ ನಿರೀಕ್ಷಿಸುತ್ತಿದ್ದಾರೆ. ಅವರಿಗೆ ನ್ಯಾಯ ಒದಗಿಸಿಕೊಡುತ್ತೇವೆ. ಕೋರ್ಟ್‌ನಲ್ಲಿಯೂ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದೇವೆ ಎಂದಿದ್ದಾರೆ.
ಇದೇ ವೇಳೆ ಸಿದ್ಧಾರ್ಥ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ಹಂಚಿಕೆ ಬಗ್ಗೆ ಸಚಿವ ಎಂ.ಬಿ.ಪಾಟೀಲ್ (M B Patil) ಸ್ಪಷ್ಟನೆ ನೀಡಿರುವ ಕುರಿತು ಮಾತನಾಡಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿಲ್ಲ. ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕಾದವರು ರಾಜ್ಯಪಾಲರು. ಸಾವಿರಾರು ಜನ ದೂರು ಕೊಡುತ್ತಾರೆ. ಪರಿಶೀಲನೆ ನಡೆಸಿದ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಅನಾವಶ್ಯಕವಾಗಿ ಆಪಾದನೆ ಮಾಡುವುದು ಸರಿಯಲ್ಲ ಎಂದರು.