ಪರೀಕ್ಷಾ ಕೇಂದ್ರ ತಲುಪಲು ಪರದಾಟ: ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆಗಿಳಿದ ಪರೀಕ್ಷಾರ್ಥಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅಭ್ಯರ್ಥಿಗಳ ಆಕ್ರೋಶ ಪಾಟಲಿಪುತ್ರ ರೈಲು ನಿಲ್ದಾಣದಲ್ಲಿ ಭಾರೀ ಗೊಂದಲಕ್ಕೆ ಕಾರಣವಾಯಿತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಮರ್ಪಕ ರೈಲು ವ್ಯವಸ್ಥೆ ಇಲ್ಲ ಎಂದು ಆರೋಪಿಸಿದ ಅಭ್ಯರ್ಥಿಗಳು ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ಭಾನುವಾರ ನಡೆಯಬೇಕಿದ್ದ ಎರಡು ಪಾಳಿಯ ಪರೀಕ್ಷೆಗಾಗಿ ಸಾವಿರಾರು ಅಭ್ಯರ್ಥಿಗಳು ಶನಿವಾರ ರಾತ್ರಿ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ನಿರೀಕ್ಷಿತ ಸಂಖ್ಯೆಗೆ ಅನುಗುಣವಾಗಿ ರೈಲುಗಳ ವ್ಯವಸ್ಥೆ ಮಾಡದಿರುವುದರಿಂದ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿ ಅಸಮಾಧಾನ ಭುಗಿಲೆದ್ದಿತು. … Continue reading ಪರೀಕ್ಷಾ ಕೇಂದ್ರ ತಲುಪಲು ಪರದಾಟ: ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆಗಿಳಿದ ಪರೀಕ್ಷಾರ್ಥಿಗಳು