ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್ ಅವರು ದಿಢೀರ್ ನಿವೃತ್ತಿ ಪ್ರಕಟಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ಬಳಿಕ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
2006 ರಲ್ಲಿ ಟಿ20 ಮತ್ತು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಅವರು, 2007 ರಲ್ಲಿ ಕೊಲಂಬೊದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದೊಂದಿಗೆ ಟೆಸ್ಟ್ ಕ್ರಿಕೆಟ್‌ಗೆ ಕಾಲಿಟ್ಟಿದ್ದರು.
37 ವರ್ಷದ ಬ್ರಾಡ್, ಆಯಷಸ್‌ನ ಅಂತಿಮ ಪಂದ್ಯ ಸೇರಿದಂತೆ ಒಟ್ಟು 167 ಟೆಸ್ಟ್‌ಗಳಿಂದ 602 ವಿಕೆಟ್‌ಗಳನ್ನು ಪಡೆದಿದ್ದಾರೆ. ಟೆಸ್ಟ್‌ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಐದನೇ ಬೌಲರ್ ಅವರಾಗಿದ್ದಾರೆ.