ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಬಿದ್ದ ವಿದ್ಯಾರ್ಥಿ; ತನ್ನದೇ ಫ್ಯಾಮಿಲಿಯ ಮೂವರಿಗೆ ಚಾಕು ಇರಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಆನ್ ಲೈನ್ ಗೇಮಿಂಗ್ ವ್ಯಸನಕ್ಕೆ ಬಿದ್ದ ವಿದ್ಯಾರ್ಥಿಯೊೂಬ್ಬ ತನ್ನ ಕುಟುಂಬದ ಮೂವರಿಗೆ ಚಾಕು ಇರಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ತನ್ನ ತಂದೆ, ತಾಯಿ ಮತ್ತು ಸಹೋದರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ.

ಕೃಷ್ಣಮೂರ್ತಿ (51), ಅವರ ಪತ್ನಿ ಪಾರ್ವತಮ್ಮ (48) ಮತ್ತು ನಯನಾ (24) ಹಲ್ಲೆಯಿಂದ ಗಾಯಗೊಂಡಿದ್ದಾರೆ. ಆರೋಪಿ ಹರ್ಷ ಇತ್ತೀಚೆಗೆ ಡಿಪ್ಲೊಮಾ ಮುಗಿಸಿದ್ದ. ಮಂಗಳವಾರ ಬೆಳಗಿನ ಜಾವ 2.30 ರ ಸುಮಾರಿಗೆ, ಹರ್ಷ ತನ್ನ ತಂದೆ, ತಾಯಿ ಮತ್ತು ಸಹೋದರಿಯನ್ನು ಚಾಕುವಿನಿಂದ ಇರಿದಿದ್ದಾನೆ.

ಹರ್ಷನನ್ನು ತಡೆಯಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ, ಅವನ ನಡವಳಿಕೆ ಅಸಹಜವಾಗಿತ್ತು ಎಂದು ಸಂತ್ರಸ್ತರು ತಿಳಿಸಿದ್ದಾರೆ. ಆತನಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ, ಪೋಷಕರು ಅವನ ಮುಖದ ಮೇಲೆ ಮೆಣಸಿನ ಪುಡಿ ಎರಚಿದ್ದಾರೆ. ಈ ಮಧ್ಯೆ, ಅವರ ಕಿರುಚಾಟ ಕೇಳಿ, ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿ, ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು, ನಯನಾಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರ್ಷನನ್ನು ಅದೇ ದಿನ ಬಂಧಿಸಲಾಯಿತು. ಅವನು ಆನ್‌ಲೈನ್ ಗೇಮಿಂಗ್‌ಗೆ ವ್ಯಸನಿಯಾಗಿದ್ದನೆಂದು ಆರೋಪಿಸಲಾಗಿದೆ, ಡಿಪ್ಲೊಮಾ ಮುಗಿಸಿದ ನಂತರ ಮನೆಯಲ್ಲಿಯೇ ಇದ್ದ, ಜೊತೆಗೆ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದರಿಂದ ಪೋಷಕರು ಆತನಿಗೆ ಬೈಯ್ದು ಬುದ್ದಿ ಹೇಳಿದ್ದರು. ಹಲ್ಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸೆಕ್ಷನ್ 307 ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆರೋಪಿಯ ಮಾನಸಿಕವಾಗಿ ಸ್ಥಿರನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!