September 27, 2026
Sunday, September 27, 2026
spot_img

ಈ ಪ್ರಪಂಚನೇ ನನಗೆ ಬೇಡ, ನೀನೇ ಖುಷಿಯಾಗಿರು ಎಂದು ಸ್ಟೇಟಸ್‌ ಹಾಕಿ ನೀರಿಗೆ ಹಾರಿ ಪ್ರಾಣಬಿಟ್ಟ ವಿದ್ಯಾರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀನೇ ಚನಾಗಿರು, ನಾನು ಈ ಪ್ರಪಂಚನೇ ಬಿಟ್ಟು ಹೋಗ್ತೀನಿ ಎಂದು ಸ್ಟೇಟಸ್‌ ಹಾಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತುಮಕೂರಿನ ತುರುವೇಕೆರೆಯಲ್ಲಿ ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿ ನೀರಿಗೆ ಹಾರಿ ಜೀವ ಬಿಟ್ಟಿದ್ದಾನೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಕಾಲೇಜಿಗೆ ಹೊರಟೆ ಎಂದು ಹೇಳಿ ಹೋಗಿದ್ದ ವಿದ್ಯಾರ್ಥಿ ಎಷ್ಟು ಸಮಯವಾದರೂ ಮನೆಗೆ ಬಂದಿರಲಿಲ್ಲ. ಮನೆಯವರ ಫೋನ್‌ ತೆಗೆದಿರಲಿಲ್ಲ. ಭಯದಲ್ಲಿ ಪೋಷಕರು ಎಲ್ಲ ಕಡೆ ಹುಡುಕಾಡಿದ್ದಾರೆ.

ಕಾಲೇಜಿನ ಹಿಂಬದಿಯಲ್ಲಿ ಬ್ಯಾಗ್‌, ಚಪ್ಪಲಿ, ಮೊಬೈಲ್‌ ಕಾಣಿಸಿದೆ. ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ನೀರಿಗೆ ಹಾರಿದ್ದಾನೆ.ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿದಾಗ ನೀರಿನ ಕಟ್ಟೆಯಲ್ಲಿ ವಿದ್ಯಾರ್ಥಿ ಧನುಷ್ ಮೃತದೇಹ ಪತ್ತೆಯಾಗಿದೆ. ಗರ್ಲ್‌ಫ್ರೆಂಡ್‌ ಜೊತೆಗಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಮೃತದೇಹವನ್ನ ಕಟ್ಟೆಯಿಂದ ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read