ಹೊಸದಿಗಂತ ವರದಿ,ಹುಬ್ಬಳ್ಳಿ:
ಕಾಲೇಜವೊಂದರ ವಿದ್ಯಾರ್ಥಿನಿ ನಗರದ ಉಣಕಲ್ ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಸವಣೂರ ತಾಲೂಕಿನ ಹೂವಿನಶಿಗ್ಲಿ ಗ್ರಾಮದ ಸವೀತಾ ನರಗುಂದ(೨೨) ಮೃತಪಟ್ಟ ವಿದ್ಯಾರ್ಥಿನಿ. ಉಣಕಲ್ ಕೆರೆಗೆ ವಾಯುವಿಹಾರಕ್ಕೆ ಹೋದ ಸಾರ್ವಜನಿಕರು ಕೆರೆಯಲ್ಲಿ ಮೃತ ದೇಹ ತೆಲುತ್ತಿರುವುದನ್ನು ಕಂಡು ವಿದ್ಯಾನಗರ ಪೊಲೀಸರಿಗೆ ತಿಳಿಸಿದ್ದಾರೆ.
ಆಗ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವವನ್ನು ಹೊರೆಗೆ ತೆಗೆದು ನಗರದ ಕಿಮ್ಸ್ ಆಸ್ಪತ್ರೆ ಶವಗಾರಕ್ಕೆ ರವಾನಿಸಿದ್ದಾರೆ.
ಧಾರವಾಡ ಜೆಎಸ್‌ಎಸ್ ಕಾಲೇಜಿನಲ್ಲಿ ಬಿಎಸ್‌ಸಿ ೫ನೇ ಸೆಮಿಷ್ಟರ್‌ನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಫೇಲ್ ಆಗಿದ್ದಳು ಆದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳವಾರ ಸಂಜೆ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಕಾಣೆಯಾದ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿ ಮಧ್ಯಾಹ್ನವೇ ಉಣಕಲ್ ಕೆರೆಯಲ್ಲಿ ಬಿದ್ದು ಮೃತಪಟ್ಟಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.