ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಒಡಿಶಾ ವಿಧಾನಸೌಧ ಬಳಿ ಭಾರೀ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ಕಿರುಕುಳದಿಂದ ಬೇಸತ್ತು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಖಂಡಿಸಿ ಒಡಿಶಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ವಿದ್ಯಾರ್ಥಿನಿ ತನ್ನ ಕಾಲೇಜಿನ ವಿಭಾಗದ ಮುಖ್ಯಸ್ಥರ ಮೇಲೆ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಳು. ಈ ಬಗ್ಗೆ ದೂರು ಕೂಡ ನೀಡಿದ್ದರು. ಯಾವುದೇ ಕ್ರಮ ಜರುಗಿಸದ ಬಗ್ಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಪ್ರಕರಣ ಖಂಡಿಸಿ ಒಡಿಶಾದ ವಿಧಾನಸೌಧದ ಎದುರು ಭಾರಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿಜು ಜನತಾದಳ (ಬಿಜೆಡಿ) ಕಾರ್ಯಕರ್ತರು ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ‘ಬಾಲಸೋರ್ ಬಂದ್’ಗೆ ಕರೆ ನೀಡಿದ್ದಾರೆ.

ಪ್ರತಿಭಟನಾಕಾರರು ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಮತ್ತು ಶಿಕ್ಷಣ ಸಚಿವ ಸೂರ್ಯಬಂಶಿ ಸೂರಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಪ್ರಕರಣದಲ್ಲಿ ಅವರು ನಿಷ್ಕ್ರಿಯರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!